Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:17 - ಕನ್ನಡ ಸತ್ಯವೇದವು C.L. Bible (BSI)

17 ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಕಾಂತನೇ, ಹೊರಡು, ಹಗಲು ತಂಪಾಗಿ ನೆರಳು ಇಳಿದು ಹೋಗುವ ತನಕ ವಿಯೋಗವೆಂಬ ಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು. ನನ್ನ ಪ್ರಿಯನೇ, ಹೊರಡು, ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಪ್ರಿಯನೇ, ಹೊತ್ತು ಮೂಡುವ ಮುಂಚೆ ಕತ್ತಲು ಕವಿಯುವ ಮೊದಲು ಹೊರಟು ಬಾ. ಒರಟಾದ ಪರ್ವತಗಳ ಮೇಲಿರುವ ಜಿಂಕೆಯಂತಿರು. ಹೌದು, ಪ್ರಾಯದ ದುಪ್ಪಿಯಂತೆಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:17
10 ತಿಳಿವುಗಳ ಹೋಲಿಕೆ  

ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು