Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:3
34 ತಿಳಿವುಗಳ ಹೋಲಿಕೆ  

ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.


ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.


ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು