Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಬರಮಾಡಿಕೊಂಡನು ನನ್ನನು ಔತಣದ ಮನೆಗೆ ನನ್ನ ಮೇಲೆತ್ತಿದನು ‘ಪ್ರೀತಿ’ ಎಂಬ ತನ್ನ ಪತಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ನನ್ನನ್ನು ಔತಣಶಾಲೆಗೆ ಬರಮಾಡಿಕೊಂಡನು, ನನ್ನ ಮೇಲೆ ಅವನು ಎತ್ತಿದ ಧ್ವಜವು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯಕರನು ನನ್ನನ್ನು ದ್ರಾಕ್ಷಾರಸದ ಮನೆಗೆ ಕರೆದುಕೊಂಡು ಬಂದನು; ನನ್ನ ಕುರಿತು ಆತನಿಗಿದ್ದ ಉದ್ದೇಶ ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಔತಣದ ಮನೆಗೆ ನನ್ನನ್ನು ಕರೆದುಕೊಂಡು ಬಂದನು. ನನ್ನ ಮೇಲೆ ಇರುವ ಅವನ ಧ್ವಜವು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:4
16 ತಿಳಿವುಗಳ ಹೋಲಿಕೆ  

ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ಸೊಲೊಮೋನನ ಪರಮಗೀತೆ : ನಲ್ಲೆ :


ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು