Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:8 - ಕನ್ನಡ ಸತ್ಯವೇದವು C.L. Bible (BSI)

8 ಅಗೋ, ನನ್ನ ಕಾಂತನ ಸಪ್ಪಳ! ಹಾರಿ ಬರುತಿಹನು ಬೆಟ್ಟಗಳ ಮೇಲೆ ಜಿಗಿದು ಬರುತಿಹನು ಗುಡ್ಡಗಳ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಗೋ, ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ ಗುಡ್ಡಗಳಲ್ಲಿ ಕುಪ್ಪಳಿಸುತ್ತಾ ಬರುತ್ತಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಗೋ, ನನ್ನ ಪ್ರಿಯನ ಸ್ವರ! ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಪ್ರಿಯನ ಸ್ವರವು! ಇಗೋ! ಅವನು ಪರ್ವತಗಳ ಮೇಲೆ ಹಾರುತ್ತಾ, ಗುಡ್ಡಗಳ ಮೇಲೆ ಜಿಗಿಯುತ್ತಾ ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:8
19 ತಿಳಿವುಗಳ ಹೋಲಿಕೆ  

ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


“ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು.


ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು.


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು