Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎನ್ನಿನಿಯನು ಜಿಂಕೆಯಂತೆಯೂ ಪ್ರಾಯದ ಎರಳೆಯ ಹಾಗೂ ಇದ್ದಾನೆ. ಆಹಾ, ನಮ್ಮ ಗೋಡೆಯ ಆಚೆ ನಿಂತಿದ್ದಾನೆ, ಕಿಟಕಿಗಳಲ್ಲಿ ನೋಡುತ್ತಾನೆ, ಜಾಲಾಂತರಗಳಲ್ಲಿ ಇಣಿಕುಹಾಕುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:9
23 ತಿಳಿವುಗಳ ಹೋಲಿಕೆ  

ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ.


ಒಮ್ಮೆ ಮನೆಯ ಕಿಟಕಿಯಿಂದ ಇಣಕಿನೋಡುವಾಗ,


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು