Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:10 - ಕನ್ನಡ ಸತ್ಯವೇದವು C.L. Bible (BSI)

10 ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರ ಕಂಬಗಳನ್ನು ಬೆಳ್ಳಿಯಿಂದ, ಒರಗನ್ನು ಚಿನ್ನದಿಂದ, ಆಸನವನ್ನು ಸಕಲಾತಿಯಿಂದ ಮಾಡಿಸಿದನು; ಮಧ್ಯಭಾಗವನ್ನು ಯೆರೂಸಲೇವಿುನ ಸ್ತ್ರೀಯರು ತಮ್ಮ ಪ್ರೀತಿಗೆ ಗುರುತಾಗಿ ನಕಾಸಿಯಿಂದ ಅಲಂಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:10
8 ತಿಳಿವುಗಳ ಹೋಲಿಕೆ  

ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು