Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:5 - ಕನ್ನಡ ಸತ್ಯವೇದವು C.L. Bible (BSI)

5 ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇವಿುನ ಸ್ತ್ರೀಯರೇ, ಉಚಿತ ಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣ ಮಾಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:5
7 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


“ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು :


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ ಆತನ ಬಲಗೈ ನನ್ನನ್ನು ಆಲಂಗಿಸಿದರೆ ಎಷ್ಟು ಚೆನ್ನಾಗಿರುತ್ತಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು