Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:1 - ಕನ್ನಡ ಸತ್ಯವೇದವು C.L. Bible (BSI)

1 ನಲ್ಲ : ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:1
17 ತಿಳಿವುಗಳ ಹೋಲಿಕೆ  

ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :


ತಿರುಗಿಸು ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ನನ್ನ ಸೆರೆಹಿಡಿದು ಬಿಡುವವು ತಮ್ಮ ನೋಟದಿಂದ. ನಿನ್ನ ಕೇಶರಾಶಿಯ ನರ್ತನ ಗಿಲ್ಯಾದ್ ಗುಡ್ಡದಿಂದ ಇಳಿಯುವ ಆಡುಮಂದೆಗೆ ಸಮಾನ.


ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.


ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು : ನಲ್ಲ : ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು