Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:11 - ಕನ್ನಡ ಸತ್ಯವೇದವು C.L. Bible (BSI)

11 ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ; ನಿನ್ನ ವಸ್ತ್ರಗಳ ಸುವಾಸನೆಯೋ ಲೆಬನೋನಿನ ಪರಿಮಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಸುವಾಸನೆಭರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:11
19 ತಿಳಿವುಗಳ ಹೋಲಿಕೆ  

ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು