Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕೊರಳು ದಾವೀದನ ನುಣುಪಾದ ಗೋಪುರ ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳ ಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಕಂಠವು ಆಯುಧಶಾಲೆಯಾಗಿ ಕಟ್ಟಿ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:4
15 ತಿಳಿವುಗಳ ಹೋಲಿಕೆ  

ದಂತದ ಗೋಪುರ ನಿನ್ನ ಕೊರಳು ನಿನ್ನ ಕಣ್ಣುಗಳು ಹೋಷ್ಬೋನಿನಲ್ಲಿನ ಬತ್‍ರಬ್ಬೀಮ್‍ ಬಾಗಿಲ ಬಳಿ ಇರುವ ಕೊಳಗಳು ನಿನ್ನ ಮೂಗು ದಮಸ್ಕದ ಕಡೆ ಇರುವ ಲೆಬನೋನಿನ ಬುರುಜು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II


ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.


ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ :


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು