Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ನಲ್ಲನು ಬಿಳುಪು ಕೆಂಪು ಬಣ್ಣವುಳ್ಳವನು; ಅವನು ಹತ್ತುಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:10
14 ತಿಳಿವುಗಳ ಹೋಲಿಕೆ  

ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.


ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು