Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:13 - ಕನ್ನಡ ಸತ್ಯವೇದವು C.L. Bible (BSI)

13 ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:13
16 ತಿಳಿವುಗಳ ಹೋಲಿಕೆ  

ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು