Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:15 - ಕನ್ನಡ ಸತ್ಯವೇದವು C.L. Bible (BSI)

15 ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:15
19 ತಿಳಿವುಗಳ ಹೋಲಿಕೆ  

ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.


ದಂತದ ಗೋಪುರ ನಿನ್ನ ಕೊರಳು ನಿನ್ನ ಕಣ್ಣುಗಳು ಹೋಷ್ಬೋನಿನಲ್ಲಿನ ಬತ್‍ರಬ್ಬೀಮ್‍ ಬಾಗಿಲ ಬಳಿ ಇರುವ ಕೊಳಗಳು ನಿನ್ನ ಮೂಗು ದಮಸ್ಕದ ಕಡೆ ಇರುವ ಲೆಬನೋನಿನ ಬುರುಜು.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇ ಕಲ್ಲು ಇರಬೇಕು.


ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು