Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:16 - ಕನ್ನಡ ಸತ್ಯವೇದವು C.L. Bible (BSI)

16 ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನ ನುಡಿ ಬಹು ಇಂಪು; ಹೌದು, ಅವನು ಸರ್ವಾಂಗದಲ್ಲಿಯೂ ಮನೋಹರನು; ಯೆರೂಸಲೇವಿುನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:16
24 ತಿಳಿವುಗಳ ಹೋಲಿಕೆ  

ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ :


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ.


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು