Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:2 - ಕನ್ನಡ ಸತ್ಯವೇದವು C.L. Bible (BSI)

2 ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:2
39 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ :


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು :


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ಅವನ ಶಿರ ಅಪ್ಪಟ ಬಂಗಾರವು ಅವನ ಕೂದಲು ಕಾಗೆಕಪ್ಪು


ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ನಲ್ಲೆ : ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.


ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು : ನಲ್ಲ : ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.


ಅಗೋ, ನನ್ನ ಕಾಂತನ ಸಪ್ಪಳ! ಹಾರಿ ಬರುತಿಹನು ಬೆಟ್ಟಗಳ ಮೇಲೆ ಜಿಗಿದು ಬರುತಿಹನು ಗುಡ್ಡಗಳ ಮೇಲೆ.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು