Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:3 - ಕನ್ನಡ ಸತ್ಯವೇದವು C.L. Bible (BSI)

3 ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ? [ಎಂದು ನಾನು ಅಂದುಕೊಂಡಾಗ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಅಂಗಿಯನ್ನು ತೆಗೆದು ಹಾಕಿರಲು, ಅದನ್ನು ಮತ್ತೆ ಹಾಕಿಕೊಳ್ಳುವುದು ಹೇಗೆ? ನಾನು ನನ್ನ ಕಾಲುಗಳನ್ನು ತೊಳೆದುಕೊಂಡಿರಲು, ನಾನು ಮತ್ತೆ ಅವುಗಳನ್ನು ಕೊಳೆ ಮಾಡುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:3
8 ತಿಳಿವುಗಳ ಹೋಲಿಕೆ  

ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ?


ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ನೆರೆಯವನಿಗೆ ನೀಡಲು ಇದೀಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎನ್ನಬೇಡ.


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು