Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು; ಅವನಲ್ಲಿ ನನ್ನ ಕರುಳು ಮರುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:4
12 ತಿಳಿವುಗಳ ಹೋಲಿಕೆ  

ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು