Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:6 - ಕನ್ನಡ ಸತ್ಯವೇದವು C.L. Bible (BSI)

6 ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:6
30 ತಿಳಿವುಗಳ ಹೋಲಿಕೆ  

ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


“ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :


ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


“ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು