Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:9 - ಕನ್ನಡ ಸತ್ಯವೇದವು C.L. Bible (BSI)

9 “ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸ್ತ್ರೀರತ್ನವೇ, [ಇತರರ] ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? ನಮ್ಮಿಂದ ನೀನು ಹೀಗೆ ಪ್ರಮಾಣ ಮಾಡಿಸುವದಕ್ಕೆ [ಇತರರ] ಕಾಂತರಿಗಿಂತ ನಿನ್ನ ಕಾಂತನಲ್ಲಿ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:9
11 ತಿಳಿವುಗಳ ಹೋಲಿಕೆ  

ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :


ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ರಾಜಕುವರಿ ವಿರಾಜಿಸುತಿಹಳು ಅಂತಃಪುರದಲಿ I ಮೆರೆಯುತಿಹಳು ಜರತಾರಿ ವಸ್ತ್ರಾಭರಣಗಳಲಿ II


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು