Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:1 - ಕನ್ನಡ ಸತ್ಯವೇದವು C.L. Bible (BSI)

1 ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಹಿಳಾಮಣಿಯೇ, ನಿನ್ನಿನಿಯನು ಎಲ್ಲಿ ಹೋದನು? ನಾವು ನಿನ್ನೊಂದಿಗೆ ಅವನನ್ನು ಹುಡುಕುವಂತೆ ತಿಳಿಸು. ನಿನ್ನ ನಲ್ಲನು ಎಲ್ಲಿಗೆ ತೆರಳಿರುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:1
13 ತಿಳಿವುಗಳ ಹೋಲಿಕೆ  

“ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ :


ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ :


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು