Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:13 - ಕನ್ನಡ ಸತ್ಯವೇದವು C.L. Bible (BSI)

13 ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ ! ನಲ್ಲೆ : ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಶೂಲಮ್ ಊರಿನವಳೇ, ತಿರುಗು, ತಿರುಗು; ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು; ಎದುರುಬದುರಿನ ನಾಟ್ಯವನ್ನು ನೋಡುವಷ್ಟು ಆಶೆಯಿಂದ ಶೂಲಮ್ ಊರಿನವಳಾದ ನನ್ನನ್ನು ಏಕೆ ನೋಡಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಶೂಲಾಮಿತಳೇ, ಹಿಂತಿರುಗಿ ಬಾ, ಹಿಂತಿರುಗಿ ಬಾ! ಹಿಂತಿರುಗಿ ಬಾ, ಹಿಂತಿರುಗಿ ಬಾ, ನಾವು ನಿನ್ನನ್ನು ನೋಡಬೇಕು! ಮಹನಯಿಮ್ ನೃತ್ಯವನ್ನು ನೋಡುವಂತೆ ಶೂಲಾಮಿತಳನ್ನೇಕೆ ನೀವು ದೃಷ್ಟಿಸಿ ನೋಡುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:13
23 ತಿಳಿವುಗಳ ಹೋಲಿಕೆ  

ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು.


ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು