Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:2
24 ತಿಳಿವುಗಳ ಹೋಲಿಕೆ  

ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು