Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇವಿುನ ಹಾಗೆ ಮನೋಹರಿ ಪತಾಕಿನಿಯಂತೆ ಭಯಂಕರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯಳೇ, ನೀನು ತಿರ್ಚ ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:4
21 ತಿಳಿವುಗಳ ಹೋಲಿಕೆ  

“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ಜುದೇಯದ ಅರಸ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಇಸ್ರಯೇಲರ ಅರಸನಾಗಿ ತಿರ್ಚದಲ್ಲಿ ಇದ್ದುಕೊಂಡು ಇಪ್ಪತ್ತನಾಲ್ಕು ವರ್ಷ ಆಳಿದನು.


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು.


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು