Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:5 - ಕನ್ನಡ ಸತ್ಯವೇದವು C.L. Bible (BSI)

5 ತಿರುಗಿಸು ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ನನ್ನ ಸೆರೆಹಿಡಿದು ಬಿಡುವವು ತಮ್ಮ ನೋಟದಿಂದ. ನಿನ್ನ ಕೇಶರಾಶಿಯ ನರ್ತನ ಗಿಲ್ಯಾದ್ ಗುಡ್ಡದಿಂದ ಇಳಿಯುವ ಆಡುಮಂದೆಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ [ಬೆಟ್ಟದ] ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಉದ್ರೇಕಗೊಳಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:5
6 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು