Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ, ಇವಳು ತಾಯಿಗೆ ಏಕಪುತ್ರಿಯು, ಹೆತ್ತವಳಿಗೆ ಆಪ್ತಳು. ಯುವತಿಯರು ನೋಡಿದಾಗ ಧನ್ಯಳೆಂದು ಹೇಳಿದರು. ರಾಣಿಯರೂ ಉಪಸ್ತ್ರೀಯರೂ ಕಂಡಾಗ ಹೀಗೆ ಪ್ರಶಂಸಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:9
14 ತಿಳಿವುಗಳ ಹೋಲಿಕೆ  

ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು