Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:1 - ಕನ್ನಡ ಸತ್ಯವೇದವು C.L. Bible (BSI)

1 ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:1
13 ತಿಳಿವುಗಳ ಹೋಲಿಕೆ  

ರಾಜಕುವರಿ ವಿರಾಜಿಸುತಿಹಳು ಅಂತಃಪುರದಲಿ I ಮೆರೆಯುತಿಹಳು ಜರತಾರಿ ವಸ್ತ್ರಾಭರಣಗಳಲಿ II


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.


“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.


ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.


ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು