Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:12 - ಕನ್ನಡ ಸತ್ಯವೇದವು C.L. Bible (BSI)

12 ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷೆಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬರಗಳು ಪುಷ್ಟಿಸಿವೆಯೋ ನೋಡೋಣ! ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:12
27 ತಿಳಿವುಗಳ ಹೋಲಿಕೆ  

ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಪ್ರೇಮವೇ, ಸಕಲ ಸೌಭಾಗ್ಯಗಳಿಂದ ನೀನೆಷ್ಟು ಸುಂದರ? ನೀನೆಷ್ಟು ಮನೋಹರ !


ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


“ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ :


ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ನನಗೆ ನೀನಲ್ಲದೆ ಇನ್ನಾರಿಹರು ಪರದಲಿ I ನಿನ್ನ ಹೊರತು ನನಗೇನು ಬೇಕಿಲ್ಲ ಇಹದಲಿ II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು