Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:13 - ಕನ್ನಡ ಸತ್ಯವೇದವು C.L. Bible (BSI)

13 ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಮಜನಕ ವೃಕ್ಷಗಳು ಪರಿಮಳಬೀರುತ್ತವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ ಬಗೆಬಗೆಯ ಹಳೆ ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:13
21 ತಿಳಿವುಗಳ ಹೋಲಿಕೆ  

ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ !


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು