Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಹೊಕ್ಕಳು ವಿುಶ್ರಪಾನಕದಿಂದ ತುಂಬಿರುವ ಗುಂಡುಬಟ್ಟಲು; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಿದ ಗೋದಿಯ ರಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ ಗುಂಡು ಬಟ್ಟಲಿನಂತಿದೆ. ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಧಿಯ ರಾಶಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:2
8 ತಿಳಿವುಗಳ ಹೋಲಿಕೆ  

ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.


ಆಗ ನಿನಗೆ ದೇಹಾರೋಗ್ಯ ದೊರಕುವುದು, ನಿನ್ನ ಎಲುಬುಗಳಿಗೆ ಶಕ್ತಿಸಾರತ್ವ ಸಿಗುವುದು.


ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II


ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ !


ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು