Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:8 - ಕನ್ನಡ ಸತ್ಯವೇದವು C.L. Bible (BSI)

8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:8
10 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ನೀಳವಾದ ನಿನ್ನ ಆಕಾರವು ಖರ್ಜೂರದ ಮರವು ನಿನ್ನ ಸ್ತನಗಳು ಅದರ ಗೊಂಚಲುಗಳು.


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು