Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:9
18 ತಿಳಿವುಗಳ ಹೋಲಿಕೆ  

ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು