Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:1 - ಕನ್ನಡ ಸತ್ಯವೇದವು C.L. Bible (BSI)

1 ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀನು ನನ್ನ ತಾಯಿಯ ಹಾಲು ಕುಡಿದ ನನ್ನ ಅಣ್ಣನಾಗಿದ್ದರೆ, ಎಷ್ಟೋ ಚೆನ್ನಾಗಿರುತ್ತಿತ್ತು! ನಾನು ನಿನ್ನನ್ನು ಕಂಡು ಹೊರಗೆಯೇ ನಿನಗೆ ಮುದ್ದಿಡುತ್ತಿದ್ದೆ. ಆಗ ಯಾರೂ ನನ್ನನ್ನು ನಿಂದಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:1
40 ತಿಳಿವುಗಳ ಹೋಲಿಕೆ  

ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:


“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.


ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು