Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:11 - ಕನ್ನಡ ಸತ್ಯವೇದವು C.L. Bible (BSI)

11 ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊಲೊಮೋನನು ನೋಡಿಕೊಳ್ಳುವವರಿಗೆ ಬಾಲ್ಹಾಮೋನಿನಲ್ಲಿ ಇದ್ದ ತನ್ನ ತೋಟವನ್ನು ಕೊಟ್ಟನು, ಅದರ ಫಲದಿಂದ ಯಾರಾದರೂ ಸಾವಿರ ರೂಪಾಯಿಯನ್ನು ಪಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನಿಗೆ ಬಾಳ್ ಹಾಮೋನಿನಲ್ಲಿ ಒಂದು ದ್ರಾಕ್ಷಿತೋಟ ಇತ್ತು. ಅವನು ಆ ದ್ರಾಕ್ಷಿತೋಟವನ್ನು ರೈತರಿಗೆ ಗುತ್ತಿಗೆಗೆ ಕೊಟ್ಟನು. ಪ್ರತಿಯೊಬ್ಬ ಗುತ್ತಿಗೆಗಾರನು ಅದರ ಫಲದಿಂದ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:11
11 ತಿಳಿವುಗಳ ಹೋಲಿಕೆ  

ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.


ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.


ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು