Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:12 - ಕನ್ನಡ ಸತ್ಯವೇದವು C.L. Bible (BSI)

12 ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:12
14 ತಿಳಿವುಗಳ ಹೋಲಿಕೆ  

ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.


ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು