Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:13 - ಕನ್ನಡ ಸತ್ಯವೇದವು C.L. Bible (BSI)

13 ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಉದ್ಯಾನವಾಸಿನಿಯೇ, ಗೆಳೆಯರು ನಿನ್ನ ದನಿ ಕೇಳಬೇಕೆಂದಿದ್ದಾರೆ; ನನಗೆ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:13
19 ತಿಳಿವುಗಳ ಹೋಲಿಕೆ  

ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ :


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II


ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು.


ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು