Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:14 - ಕನ್ನಡ ಸತ್ಯವೇದವು C.L. Bible (BSI)

14 ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎನ್ನಿನಿಯನೇ, ತ್ವರೆಪಡು, ಸುಗಂಧಸಸ್ಯಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:14
9 ತಿಳಿವುಗಳ ಹೋಲಿಕೆ  

ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.


ಆದರೆ ನೀವು ಎಲ್ಲ ಊರುಗಳಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಅಭಿವೃದ್ಧಿಪಡಿಸುವ ಮೇರೆಗೆ ಪಶುಪ್ರಾಣಿಗಳನ್ನು ಇಷ್ಟಾನುಸಾರ ಕೊಯ್ದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು