Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ನೀನು ನನಗೆ ಉಪದೇಶಮಾಡಬಹುದಾಗಿತ್ತು; ದ್ರಾಕ್ಷೆಯ ವಿುಶ್ರಪಾನಕವನ್ನು, ನನ್ನ ದಾಳಿಂಬರದ ಸವಿರಸವನ್ನು, ನಿನಗೆ ಕುಡಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:2
16 ತಿಳಿವುಗಳ ಹೋಲಿಕೆ  

ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು