ಪರಮಗೀತೆ 8:7 - ಕನ್ನಡ ಸತ್ಯವೇದವು C.L. Bible (BSI)7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು : ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜಲದ ರಾಶಿಗಳೂ ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳಿಗೂ ಅದನ್ನು ಮುಣುಗಿಸಲು ಶಕ್ತಿಯಿಲ್ಲ. ಒಬ್ಬನು ತನ್ನ ಮನೆಮಾರನ್ನೆಲ್ಲಾ ಕೊಟ್ಟು ಪ್ರೀತಿಯನ್ನು ಪಡೆಯಲು ಯತ್ನಿಸಿದರೆ ಕೇವಲ ತಿರಸ್ಕಾರಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು. ಅಧ್ಯಾಯವನ್ನು ನೋಡಿ |