Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:8 - ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಸ್ತನ ಬಾರದ ತಂಗಿ ನಮಗಿದ್ದಾಳೆ ನಾವೇನು ಮಾಡೋಣ ಅವಳನ್ನು ವರಿಸಲು ಬಂದರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ಕೇಳತಕ್ಕ ಸಮಯದಲ್ಲಿ ಅವಳ ಹಿತಕ್ಕೆ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:8
29 ತಿಳಿವುಗಳ ಹೋಲಿಕೆ  

ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.


ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


ನೀನೂ ಕುಡಿದು, ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವೆ. ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವೆ.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ :


ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳು.


ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!


ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು