Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:1 - ಕನ್ನಡ ಸತ್ಯವೇದವು C.L. Bible (BSI)

1 ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯಾ ಪುಸ್ತಕಾತ್ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲೆ ಸಗ್ಳೆ ಲಿವ್ನ್ ಥವಲ್ಲೆ ಹಾಯ್. ಅಪ್ನಾಚ್ಯಾ ಸೆವಕಾಕ್ನಿ ಕಾಯ್-ಕಾಯ್ ಲಗ್ಗುನಾಚ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಕ್ರಿಸ್ತಾನ್ ದೆವ್‍ದುತಾಕ್ ಧಾಡುನ್ ಅಪ್ನಾಚ್ಯಾ ಸೆವಕಾಕ್ ಜುವಾಂವಾಕ್ ಹೆ ಸಗ್ಳೆ ಕಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:1
30 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.


ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು