Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:13 - ಕನ್ನಡ ಸತ್ಯವೇದವು C.L. Bible (BSI)

13 ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪರತಲ್ಲ್ಯಾ ತನ್ನಾ ಸಾತ್ ದಿವೆ ಥವ್ತಲೆ ಖಾಂಬೆ ಅನಿ ತೆಂಚ್ಯಾ ಮದ್ದಿ ಮಾನ್ಸಾಚ್ಯಾ ಸರ್ಕೊ ಎಕ್ಲೊ ಹೊತ್ತೊ. ತೆನಿ ಅಪ್ನಾಚ್ಯಾ ಪಾಂಯಾಕ್ನಿ ಜಾವ್ನ್ ಲಾಗಿ ಸರ್ಕೊ ಲಾಂಬ್ಲೊ ಝಗೊ ನೆಸಲ್ಲ್ಯಾನ್, ಅನಿ ತೆಚ್ಯಾ ಹಿರ್‍ದ್ಯಾರ್ ಎಕ್ ಸೊನ್ಯಾಚೊ ಪಟ್ಟೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:13
15 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ಆಮೇಲೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿಸಿ, ಅದರಿಂದ ಅವನ ಕವಚವನ್ನು ಕಟ್ಟಿ,


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು