Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:18 - ಕನ್ನಡ ಸತ್ಯವೇದವು C.L. Bible (BSI)

18 ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:18
32 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು