Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:2 - ಕನ್ನಡ ಸತ್ಯವೇದವು C.L. Bible (BSI)

2 ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಜುವಾಂವಾಕ್ ಅಪ್ನಿ ಕಾಯ್-ಕಾಯ್ ಬಗಟ್ಲ್ಯಾನಾಯ್ ತೆ ಸಗ್ಳೆ ಸಾಂಗಟ್ಲ್ಯಾನಾಯ್. ಹಿ ಎಕ್ ದೆವಾಕ್ನಾ ಯೆಲ್ಲಿ ಖಬರ್ ಅನಿ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲಿ ಖರಿ ಸಂಗತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:2
22 ತಿಳಿವುಗಳ ಹೋಲಿಕೆ  

ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.


ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು