Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:3 - ಕನ್ನಡ ಸತ್ಯವೇದವು C.L. Bible (BSI)

3 ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹೆ ಪುಸ್ತಕ್ ವಾಚ್ವುತಲ್ಯಾಚೆ ಕೌಡೆ ಬರೆ, ಅನಿ ಹ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯ್ಕುನ್ ಹ್ಯಾ ಪುಸ್ತಕಾತ್ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಸರ್ಕೆ ಚಲ್ತಲ್ಯಾಚೆ ಕೌಡೆ ಬರೆ! ಹಿ ಸಗ್ಳಿ ವಿಶಯಾ ಘಡ್ತಲೊ ಎಳ್ ಜಗ್ಗೊಳ್ ಯೆವ್ನ್ ಪಾವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:3
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


“ನೋಡು, ನೀನು ಬಾಬಿಲೋನನ್ನು ತಲುಪಿದ ಮೇಲೆ ಈ ಮಾತುಗಳನ್ನೆಲ್ಲ ತಕ್ಕವರಿಗೆ ಓದಿ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು