Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:8 - ಕನ್ನಡ ಸತ್ಯವೇದವು C.L. Bible (BSI)

8 “ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೊ ಹಾಯ್, ಜೊ ಹೊತ್ತೊ ಅನಿ ಅನಿಫಿಡೆ ಯೆತಲೊ ಹಾಯ್ ತೊ ಸರ್ವ ಶಕ್ತಿಮಾನ್ ದೆವ್ ಮನ್ತಾ, “ಜೊ ಹಾಯ್, ಜೊ ಹೊತ್ತೊ, ಅನಿ ಫಿಡೆ ಯೆತಲೊ ಸಗ್ಳ್ಯಾನ್ ಮೊಟೊ ದೆವ್” ಆರಂಬ್ ಅನಿ ಅಂತ್ ಮಿಯಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:8
29 ತಿಳಿವುಗಳ ಹೋಲಿಕೆ  

ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು