Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಅನಿ ಎಕ್ ಮೊಟೊ ದೆವ್‍ದುತಾ ಸರ್ಗಾತ್ನಾ ಖಾಲ್ತಿ ಯೆತಲೊ ಮಿಯಾ ಬಗಟ್ಲೊ. ಎಕ್ ಮೊಡಾನ್ ತೆಕಾ ಲಪಟಲ್ಲೆ ಹೊತ್ತೆ ಅನಿ ತ್ಯೆಚ್ಯಾ ಟಕ್ಲ್ಯಾಚ್ಯಾ ಭೊತ್ಯಾನಿ ಕಾಮನ್‍ಬಿಲ್ಲ್ ಹೊತ್ತೆ; ತೆಚೆ ತೊಂಡ್ ದಿಸ್ ಸರ್ಕೆ ಹೊತ್ತೆ, ಅನಿ ತೆಚೆ ಡೊಕೆ ಆಗಿಚ್ಯಾ ಖಾಂಬ್ಯಾಂಚ್ಯಾ ಸರ್ಕೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:1
28 ತಿಳಿವುಗಳ ಹೋಲಿಕೆ  

ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.


ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.


ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.


ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು