Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:10 - ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ತಿ ಬಾರಿಕ್ಲಿ ಸುಳ್ಳಿ ತೆಚ್ಯಾ ಹಾತಾತ್ನಾ ಘೆಟ್ಲೊ ಅನಿ ಖಾಲೊ, ಅನಿ ತೆಚಿ ರುಚಿ ತೊಂಡಾತ್ ಮ್ಹವಾ ಸರ್ಕಿ ಗೊಡ್ ಹೊತ್ತಿ. ಖರೆ ಮಿಯಾ ತೆ ಗಿಳಲ್ಲ್ಯಾ ತನ್ನಾ ಪೊಟಾತ್ ಅಂಬೊಟ್ ಹೊವ್ನ್ ಬದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:10
9 ತಿಳಿವುಗಳ ಹೋಲಿಕೆ  

ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.


ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು.


ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು