ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.
ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.
“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.
ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.