Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:11 - ಕನ್ನಡ ಸತ್ಯವೇದವು C.L. Bible (BSI)

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಾಡೆ ತಿನ್ ದಿಸಾಚ್ಯಾ ಮಾನಾ ಎಕ್ ಜಿವ್-ದಿತಲೊ ಸ್ವಾಸ್ ದೆವಾಕ್ನಾ ಯೆಲೊ, ತೆಂಚ್ಯಾ ಭುತ್ತುರ್ ಗುಸ್ಲೊ, ಅನಿ ತೆನಿ ಉಟುನ್ ಅಪ್ಲ್ಯಾ ಪಾಯಾವೈರ್ ಇಬೆ ರ್‍ಹಾಲೆ ತೆಂಕಾ ಬಗಟಲ್ಲೆ ಸಗ್ಳೆಜನಾ ಭಿಂಯಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:11
11 ತಿಳಿವುಗಳ ಹೋಲಿಕೆ  

ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು