Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ತ್ಯಾ ದೊನ್ ಪ್ರವಾದ್ಯಾಕ್ನಿ ಸರ್ಗಾವೈನಾ,“ವರ್ತಿ ಯೆವಾ!” ಮನುನ್ ಸಾಂಗ್ತಲೊ ಎಕ್ ಮೊಟೊ ಧನ್ ಆಯ್ಕೊ ಯೆಲೊ. ತೆಂಚಿ ದುಸ್ಮನಾ ತೆಂಕಾ ಬಗುನ್ಗೆತುಚ್ ಹೊತ್ತಿ ತನ್ನಾ ತೆನಿ ಎಕ್ ಮೊಡಾತ್ನಾ ಸರ್‍ಗಾ ವರ್ತಿ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:12
21 ತಿಳಿವುಗಳ ಹೋಲಿಕೆ  

ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು